ಕಬ್ಬಿಗೆ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಹೋರಾಟ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.
ಇಂದು ಡಿಸಿಪಿ ಅವರು ಚೆನ್ನಮ್ಮ ಸರ್ಕಲ್ ಬಳಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಟ್ರಾಫಿಕ್ ಎಸಿಪಿ, ಉಪನಗರ ಇನ್ಸ್ಪೆಕ್ಟರ್, ಟ್ರಾಫಿಕ್ ಪಿಎಸ್ಐ ಮತ್ತು ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.
ನಾಳಿನ ಹೋರಾಟದ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನ ಸಂಚಾರ ಸುಗಮವಾಗಿರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಜೊತೆಗೆ ಪರ್ಯಾಯ ಮಾರ್ಗ, ಬ್ಯಾರಿಕೇಡ್ ಮತ್ತು ಬಿಗಿ ಬಂದೋಬಸ್ತ್ ವ್ಯವಸ್ಥೆ ಕುರಿತು ಚರ್ಚೆ ನಡೆಸಲಾಯಿತು.