Home / ಹುಬ್ಬಳ್ಳಿ-ಧಾರವಾಡ / ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬ**ಲಿ...

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬ**ಲಿ!

E
By ETV 24X7 Chief Admin
October 22, 2026 221 views 0 comments Edit Article
ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬ**ಲಿ!

ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಮತ್ತೊಂದು ಜೀವ ಬಲಿ ಪಡೆದಿದೆ.

ಹುಬ್ಬಳ್ಳಿ ನಗರದ ಭರತ್ ನಗರ ನಿವಾಸಿ, ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ವಿದ್ಯಾ ಮಂಜುನಾಥ ಗೌಡರ್, 38 ವರ್ಷದ ಮಹಿಳೆ ಮಾಂಜಾ ದಾರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ಹುಬ್ಬಳ್ಳಿ ಬ್ರೇಕಿಂಗ್: ಮಾಂಜಾ ದಾರಕ್ಕೆ ಮಹಿಳೆ ಬ**ಲಿ!"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ, ಮನೆಯಿಂದ ಲ್ಯಾಬ್ ಗೆ ಸ್ಕೂಟಿ ಮೇಲೆ ಹೋಗುತ್ತಿದ್ದಾಗ, ಹುಬ್ಬಳ್ಳಿ ನಗರದ ಶಿವಶಂಕರ ಕಾಲೋನಿ ಬಳಿ ಗಾಳಿಪಟ ಹಾರಿಸಲು ಬಳಸುವ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದೆ. ಮಾಂಜಾ ದಾರ ಸಿಲುಕಿದ ರಭಸಕ್ಕೆ ಸ್ಕೂಟಿಯಿಂದ ಕೆಳಗೆ ಬಿದ್ದ ಮಹಿಳೆಗೆ ತೀವ್ರ ರಕ್ತಸ್ರಾವವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video

ಈ ಘಟನೆಗೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಂಜಾ ದಾರ ಬಳಸುತ್ತಿದ್ದವರನ್ನು ಪತ್ತೆ ಮಾಡುತ್ತಿದ್ದೇವೆ, ಯಾವುದೇ ಕಾರಣಕ್ಕೂ ಗಾಳಿಪಟ ಹಾರಿಸಲು ಮಾಂಜಾ ದಾರ ಬಳಸಬಾರದು, ಬಳಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ, ಮಾರಾಟ ಮಾಡುವವರ ಮೇಲೂ ಕೇಸ್ ದಾಖಲಾಗುತ್ತದೆ ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ ಜನತೆ ದಯವಿಟ್ಟು ಮಾಂಜಾ ದಾರ ಬಳಸಬೇಡಿ, ನಿಮ್ಮ ಮಕ್ಕಳಿಗೆ ಗಾಳಿಪಟ ಕೊಡುವಾಗ ಸಾಮಾನ್ಯ ದಾರ ಕೊಡಿ. ಒಂದು ಜೀವ ಹೋಯ್ತು!

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.